ನವದೆಹಲಿ, ಅ 02 (DaijiworldNews/HR): 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ತೀಸ್ತಾ ಸೆತಲ್ವಾಡ್ ಅವರು ಸಾಕ್ಷಿಗಳ ಸುಳ್ಳು ಹೇಳಿಕೆಗಳನ್ನು ಸಿದ್ಧಪಡಿಸಿ, ಗಲಭೆಗಳ ತನಿಖೆಗಾಗಿ ರಚಿಸಲಾದ ನಾನಾವತಿ ಆಯೋಗದ ಮುಂದೆ ಸಲ್ಲಿಸಿದ ಆರೋಪ ಎದುರಿಸುತ್ತಿದ್ದಾರೆ.
ಇನ್ನು ತೀಸ್ತಾ ಸೆಟಲ್ವಾಡ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್, ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ಕೇಳಿಕೊಂಡಿದೆ.