ಚಿತ್ರದುರ್ಗ, ಅ 02 (DaijiworldNews/HR): ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮುಂದೆ ಪೊಲೀಸರು ಹಾಜರುಪಡಿಸಿದ್ದು, ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸೆಪ್ಟೆಂಬರ್ 5ರ ವರೆಗೆ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಶ್ರೀಗಳ ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆ ಕೋರ್ಟ್ಗೆ ಮಾಹಿತಿಯನ್ನೂ ನೀಡದೆ ನೇರವಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದನ್ನು ಪ್ರಶ್ನಿಸಿರುವ ಕೋರ್ಟ್ ತಕ್ಷಣ ಬಂಧಿತರಾಗಿದ್ದ ಸ್ವಾಮೀಜಿಯನ್ನು ಕೋರ್ಟ್ ಮುಂದೆ ಹಾಜರುಪಡಿಸುವಂತೆ ಸೂಚಿಸಿದೆ.
ಇನ್ನು ಹೃದಯದ ಆರೋಗ್ಯ ಸಮಸ್ಯೆ ಕಂಡುಬಂದಿರುವುದರಿಂದ ಚಿತ್ರದುರ್ಗ ಜಿಲ್ಲಾಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳನ್ನು ಪೊಲೀಸರು 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ಗೆ ಹಾಜರುಪಡಿಸಿದ್ದಾರೆ.