ಕೋಲ್ಕತ್ತಾ, ಸೆ 02 (DaijiworldNews/DB): ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಏಕಸದಸ್ಯ ಪೀಠವು ಸಿಬಿಐ ತನಿಖೆ ನಡೆಸುವಂತೆ ನೀಡಿದ್ದ ಆದೇಶವನ್ನು ಕಲ್ಕತ್ತಾ ಹೈಕೋರ್ಟ್ನ ವಿಭಾಗೀಯ ಪೀಠ ಎತ್ತಿಹಿಡಿದಿದೆ.
ನ್ಯಾಯಮೂರ್ತಿಗಳಾದ ಸುಬ್ರತಾ ತಾಲೂಕ್ಡರ್ ಮತ್ತು ಲಪಿತಾ ಬ್ಯಾನರ್ಜಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಏಕಸದಸ್ಯ ಪೀಠದ ಆದೇಶವನ್ನು ಪುರಸ್ಕರಿಸಿದೆ. ಅಲ್ಲದೆ. ಏಕಸದಸ್ಯ ಪೀಠವು ತನಿಖೆಯ ಮೇಲ್ವಿಚಾರಣೆಯನ್ನೂ ನಡೆಸಲಿದೆ ಎಂದು ತಿಳಿಸಿದೆ.
ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಸಿಬಿಐ ತನಿಖೆ ನಡೆಸುವಂತೆ ಆದೇಶ ನೀಡಿದ್ದರು. ಅಲ್ಲದೆ ಅಗತ್ಯ ಬಿದ್ದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಬಗ್ಗೆಯೂ ತನಿಖೆ ನಡೆಸುವುದಾಗಿ ಹೇಳಿದ್ದರು.