ನವದೆಹಲಿ, ಸೆ 03 (DaijiworldNews/MS): ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ ಎಂದು ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ ಆರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ಮೋದಿ ಅವರು, ₹ 3,800 ಕೋಟಿ ಮೊತ್ತದ 8 ಯೋಜನೆಗಳನ್ನು ಲೋಕಾರ್ಪಣೆ ಮತ್ತು ಶಿಲಾನ್ಯಾಸ ನೆರವೇರಿಸಿದ್ದರು. .
ಸಮಾವೇಶ ಮುಗಿಸಿ ದೆಹಲಿಗೆ ವಾಪಸ್ ಆಗಿರುವ ಮೋದಿ, ಹಲವು ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಇಲ್ಲಿನ ಜನರ ಪ್ರೀತಿಯ ಬಗ್ಗೆ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ. 'ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ' ಎಂದು ಟ್ವೀಟ್ ಮಾಡಿದ್ದಾರೆ.