ದೆಹಲಿ, ಸೆ 03 (DaijiworldNews/HR): 200 ಕೋಟಿ ಹಣ ಅಕ್ರಮ ವರ್ಗಾವಣೆ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ನೋರಾ ಫತೇಹಿ ಅವರನ್ನು ದೆಹಲಿ ಪೊಲೀಸರು ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಈಗಾಗಲೇ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದು, ಇದೇ ಪ್ರಕರಣದಲ್ಲಿ ನೋರಾ ಫತೇಹಿ ಅವರನ್ನು ವಿಚಾರಣೆ ಮಾಡಿದ್ದಾರೆ.
ಇನ್ನು ನೋರಾ ಫತೇಹಿ ಅವರಿಗೆ ಬೆಲೆ ಬಾಳುವ ವಾಚ್, ಬ್ಯಾಗ್ , ಬಿಎಂಡಬ್ಲ್ಯೂ ಕಾರು ಹಾಗೂ ಸ್ವಲ್ಪ ನಗದು ಹಣವನ್ನು ಉಡುಗೊರೆಯಾಗಿ ನೀಡಿರುವುದಾಗಿ 200 ಕೋಟಿ ಹಣ ಅಕ್ರಮ ವರ್ಗಾವಣೆ ಹಾಗೂ ವಂಚನೆ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ವಿಚಾರಣೆ ವೇಳೆ ಅಧಿಕಾರಿಗಳಿಗೆ ಹೇಳಿದ್ದು, ಈ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಮತ್ತೆ ವಿಚಾರಣೆ ನಡೆಸಿದ್ದಾರೆ.