ಒಡಿಸ್ಸಾ, ಸೆ 04 (DaijiworldNews/HR): ಒಡಿಸ್ಸಾದ ಕಟಕ್ನಲ್ಲಿ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ನ್ಯಾಯಾಧೀಶರ ಅಧಿಕೃತ ನಿವಾಸದಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಸುಭಾಷ್ ಕುಮಾರ್ ಬಿಹಾರಿ ಅವರ ಮೃತ ದೇಹ ಪತ್ತೆಯಾಗಿದ್ದು, ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲವೆಂದು ಹೇಳಲಾಗಿದೆ.
ಇನ್ನು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವ ಪೊಲೀಸರು ಇದು ಆತ್ಮಹತ್ಯೆ ಪ್ರಕರಣ ಇರಬಹುದು ಎಂದು ಶಂಕಿಸಿದ್ದಾರೆ.