ನವದೆಹಲಿ, ಸೆ 04 (DaijiworldNews/HR): ಬೆಲೆ ಏರಿಕೆ ಖಂಡಿಸಿ ದೆಹಲಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಮಧ್ಯ ದೆಹಲಿಯ ರಾಮಲೀಲಾ ಮೈದಾನ ಮತ್ತು ಸುತ್ತಮುತ್ತ ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.
ರ್ಯಾಲಿ ನಡೆಯುವ ಸ್ಥಳದಲ್ಲಿ ಸ್ಥಳೀಯ ಪೊಲೀಸರೊಂದಿಗೆ ಅರೆಸೈನಿಕ ಪಡೆಗಳನ್ನು ನಿಯೋಜಿಸಿದ್ದು, ರಾಮಲೀಲಾ ಮೈದಾನದ ಪ್ರವೇಶ ದ್ವಾರಗಳಲ್ಲಿ ಮೆಟಲ್ ಡಿಟೆಕ್ಟರ್ಗಳನ್ನು ಸಹ ಇರಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ..
ಇನ್ನು ಕಾಂಗ್ರೆಸ್ ನಾಯಕರು ಈ ವಾರದ ಆರಂಭದಲ್ಲಿ ದೇಶದಾದ್ಯಂತ 22 ನಗರಗಳಲ್ಲಿ ಸುದ್ದಿಗೋಷ್ಠಿಗಳನ್ನು ನಡೆಸಿ, ಸೆಪ್ಟೆಂಬರ್ 4 ರಂದು ರಾಮಲೀಲಾ ಮೈದಾನದಲ್ಲಿ 'ಮೆಹಂಗೈ ಪರ್ ಹಲ್ಲಾ ಬೋಲ್ ರ್ಯಾಲಿ' ಮತ್ತು 'ದಿಲ್ಲಿ ಚಲೋ' ಕರೆ ನೀಡಿದ್ದಾರೆ.