ಬೆಂಗಳೂರು, ಸೆ 04 (DaijiworldNews/DB): ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಜೀವ ಬಲಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಬಿಎಂಪಿ ಕಸದ ಲಾರಿ ಢಿಕ್ಕಿಯಾಗಿ ಬೈಕ್ ಸವಾರೊಬ್ಬರು ಸಾವನ್ನಪ್ಪಿದ್ದಾರೆ.
ಮಾವಿನಕುಂಟೆ ಗ್ರಾಮದ ರಾಜು (30) ಮೃತ ವ್ಯಕ್ತಿ. ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಬಳಿ ಅಪಘಾತ ಸಂಭವಿಸಿದೆ. ದೊಡ್ಡಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಿಬಿಎಂಪಿ ಕಸದ ಲಾರಿ ಢಿಕ್ಕಿಯಾಗಿ ಈ ಹಿಂದೆ ಮಹಿಳೆ, ವೃದ್ದ ಸೇರಿದಂತೆ ಇನ್ನೂ ಕೆಲವರು ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಯುವಕ ಬಲಿಯಾಗಿದ್ದಾನೆ.