ಲಕ್ನೊ, ಸೆ 04 (DaijiworldNews/DB): ಕಳೆದ ಐದೂವರೆ ವರ್ಷಗಳಲ್ಲಿ ಉತ್ತರ ಪ್ರದೇಶದಲ್ಲಿ ಗಲಭೆಗಳು ನಡೆದಿಲ್ಲ. ದಂಗೆಮುಕ್ತ ಮತ್ತು ಅಭಿವೃದ್ದಿಯುಕ್ತ ರಾಜ್ಯವಾಗಿ ಉತ್ತರ ಪ್ರದೇಶ ಬದಲಾಗುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಲಿದ್ದಾರೆ.
ಬಿಜ್ನೋರ್ನಲ್ಲಿ 267 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದ ಅವರು, ಹೂಡಿಕೆದಾರರಿಗೆ ಆದ್ಯತೆಯ ತಾಣವಾಗಿ ಉತ್ತರಪ್ರದೇಶ ರೂಪುಗೊಳ್ಳುತ್ತಿದೆ. ವ್ಯಾಪಾರಿಗಳು ಮತ್ತು ಉದ್ಯಮಿಗಳಿಗೆ ಭದ್ರತೆ ಇಲ್ಲಿದ್ದು, ಇದನ್ನು ಉಲ್ಲಂಘಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದರು.
ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಸ್ಥಾಪನೆ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ. ಶಿಕ್ಷಣ, ಆರೋಗ್ಯ, ಕೃಷಿ, ಉದ್ಯೋಗ ಸೃಷ್ಟಿ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಅಭಿವೃದ್ದಿಯಾಗುತ್ತಿದೆ. ದಂಗೆ ಮುಕ್ತ ಮತ್ತು ಅಭಿವೃದ್ದಿಯುಕ್ತ ರಾಜ್ಯವಾಗಿ ಉತ್ತರ ಪ್ರದೇಶ ಸಾಗುತ್ತಿದೆ ಎಂದು ತಿಳಿಸಿದರು.
ಪೊಲೀಸರಿಗೆ ಈ ಹಿಂದೆ ಇರದ ವಸತಿ ಸೌಲಭ್ಯವನ್ನು ನಿರ್ಮಾಣ ಮಾಡಲಾಗುತ್ತಿದೆ. ಅವರಿಗೆ ಉತ್ತಮ ಸೌಲಭ್ಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಮಹಿಳಾ ಹಾಸ್ಟೆಲ್ ಕೂಡಾ ನಿರ್ಮಾಣಗೊಂಡಿದೆ ಎಂದರು.