ಪಾಲ್ಘರ್, ಸೆ 04 (DaijiworldNews/HR): ಟಾಟಾ ಸಮೂಹದ ಮಾಜಿ ಅಧ್ಯಕ್ಷ ಕೈಗಾರಿಕೋದ್ಯಮಿ ಸೈರಸ್ ಮಿಸ್ತ್ರಿ ಅವರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೈರಸ್ ಮಿಸ್ತ್ರಿ ಅವರ ಮರ್ಸಿಡಿಸ್ ಕಾರು ಅಹಮದಾಬಾದ್ನಿಂದ ಮುಂಬೈಗೆ ಹಿಂದಿರುಗುತ್ತಿದ್ದಾಗ ಪಾಲ್ಘರ್ನ ಚರೋತಿಯಲ್ಲಿ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಕಾರು ಚಾಲಕ ಸೇರಿದಂತೆ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ.
ಇನ್ನು ಭೀಕರ ಅಪಘಾತದಲ್ಲಿ ಟಾಟಾ ಗ್ರೂಪ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮೃತಪಟ್ಟಿದ್ದು, ಎಲ್ಲಾ ಗಾಯಾಳುಗಳನ್ನು ಗುಜರಾತ್ನ ಆಸ್ಪತ್ರೆಗೆ ರವಾನಿಸಲಾಗಿದೆ.
ಟಾಟಾ ಸನ್ಸ್ ಚೇರ್ಮನ್ ಆಗಿ ನೇಮಕಗೊಂಡಿದ್ದ ಸೈರಸ್ ಮಿಸ್ತ್ರಿ ಅವರನ್ನು ಭಿನ್ನಾಭಿಪ್ರಾಯದ ಕಾರಣಕ್ಕೆ 2016ರಲ್ಲಿ ಹುದ್ದೆಯಿಂದ ತೆರವುಗೊಳಿಸಲಾಗಿತ್ತು.