ಚಂಡೀಗಡ, ಸೆ 04 (DaijiworldNews/HR): ಶಿರೋಮಣಿ ಅಕಾಲಿ ದಳದ ವರಿಷ್ಠ ಪ್ರಕಾಶ್ ಸಿಂಗ್ ಬಾದಲ್ (94) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಇಲ್ಲಿನ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿದೆ.
ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ಇನ್ನು ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಜೂನ್ನಲ್ಲಿ ಶ್ವಾಸನಾಳದ ಅಸ್ತಮಾ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊಹಾಲಿಯ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.