ಜಮ್ಮು, ಸೆ 04 (DaijiworldNews/HR): ಕಾಂಗ್ರೆಸ್ ತೊರೆದ ನಂತರ ಜಮ್ಮುವಿನಲ್ಲಿ ನಡೆದ ಮೊದಲ ಸಾರ್ವಜನಿಕ ಸಭೆಯಲ್ಲಿ ತಮ್ಮ ಸ್ವಂತ ರಾಜಕೀಯ ಸಂಘಟನೆಯನ್ನು ಪ್ರಾರಂಭಿಸುವುದಾಗಿ ಗುಲಾಂ ನಬಿ ಆಜಾದ್ ಅವರು ಘೋಷಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ನಾನು ಇನ್ನೂ ಪಕ್ಷಕ್ಕೆ ಹೆಸರನ್ನು ನಿರ್ಧರಿಸಿಲ್ಲ. ಜಮ್ಮು ಕಾಶ್ಮೀರದ ಜನರು ಪಕ್ಷದ ಹೆಸರು ಮತ್ತು ಧ್ವಜವನ್ನು ನಿರ್ಧರಿಸುತ್ತಾರೆ. ನಾನು ನನ್ನ ಪಕ್ಷಕ್ಕೆ ಹಿಂದೂಸ್ತಾನಿ ಹೆಸರನ್ನು ಇಡುತ್ತೇನೆ, ಅದು ಎಲ್ಲರಿಗೂ ಅರ್ಥವಾಗುತ್ತದೆ ಎಂದರು.
ಇನ್ನು ನನ್ನ ಪಕ್ಷವು ಸಂಪೂರ್ಣ ರಾಜ್ಯತ್ವದ ಮರುಸ್ಥಾಪನೆ, ಭೂಮಿಯ ಹಕ್ಕು ಮತ್ತು ಸ್ಥಳೀಯ ನಿವಾಸಕ್ಕೆ ಉದ್ಯೋಗದ ಮೇಲೆ ಕೇಂದ್ರೀಕರಿಸುತ್ತದೆ ಎಂದಿದ್ದಾರೆ.
ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ದೇಶಾದ್ಯಂತ ತಮ್ಮ ರಾಜೀನಾಮೆಗಳು, ವಾಟ್ಸಾಪ್ ಸಂದೇಶಗಳು ಮತ್ತು ಇತರ ಮಾಧ್ಯಮಗಳ ಮೂಲಕ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.