ನವದೆಹಲಿ, ಸೆ 04 (DaijiworldNews/SM): ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ತಪ್ಪಿತಸ್ಥರೆಂದು ಸಾಬೀತಾಗಿರುವ ಹಿನ್ನೆಲೆಯಲ್ಲಿ ವಿಜಯ್ ಮಲ್ಯ ವಿರುದ್ಧದ ಶಿಕ್ಷೆಯ ಪ್ರಮಾಣವನ್ನು ಸುಪ್ರೀಂಕೋರ್ಟ್ ಸೋಮವಾರ ಪ್ರಕಟಿಸುವ ಸಾಧ್ಯತೆ ಇದೆ. ನಿಷ್ಕ್ರಿಯ ಕಿಂಗ್ಫಿಷರ್ ಏರ್ಲೈನ್ಸ್ಗೆ ಸಂಬಂಧಿಸಿದ ಸುಮಾರು 9,000 ಕೋಟಿ ರುಪಾಯಿಗಳ ಬ್ಯಾಂಕ್ ಸಾಲದ ಡೀಫಾಲ್ಟ್ ಪ್ರಕರಣದಲ್ಲಿ ವಿಜಯ್ ಮಲ್ಯ ಆರೋಪಿಯಾಗಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಮಾರ್ಚ್ 10 ರಂದು ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಯ ಆದೇಶವನ್ನು ಕಾಯ್ದಿರಿಸಿತ್ತು.
ನ್ಯಾಯಾಂಗ ನಿಂದನೆ ಕಾನೂನು ಮತ್ತು ಶಿಕ್ಷೆಗೆ ಸಂಬಂಧಿಸಿದ ವಿವಿಧ ಅಂಶಗಳ ಕುರಿತು ಹಿರಿಯ ವಕೀಲ ಜೈದೀಪ್ ಗುಪ್ತಾರ ವಾದವನ್ನು ಸುಪ್ರೀಂ ಕೋರ್ಟ್ ಆಲಿಸಿದೆ ಮತ್ತು ವಿಜಯ್ ಮಲ್ಯ ಪರ ವಕೀಲ ಅಂಕುರ್ ಸೈಗಲ್ ಅವರಿಗೆ ಶಿಕ್ಷೆಯ ಅಂಶದ ಕುರಿತು ಲಿಖಿತ ಸಲ್ಲಿಕೆಗಳನ್ನು ಸಲ್ಲಿಸಲು ಕೊನೆಯ ಅವಕಾಶ ನೀಡಿತು.