ನವದೆಹಲಿ, ಸೆ 05 (DaijiworldNews/MS): ಎಲ್ಗರ್ ಪರಿಷತ್– ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಬಂಧಿತರಾಗಿರುವ ಕಾರ್ಯಕರ್ತ ಗೌತಮ್ ನವ್ಲಾಖಾ(70) ಅವರ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ಎನ್ಐಎ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ.
ಗೌತಮ್ ನವ್ಲಾಖಾ ಅವರನ್ನು ಆಗಸ್ಟ್ 28, 2018 ರಂದು ಪ್ರಕರಣದಲ್ಲಿಎಲ್ಗರ್ ಪರಿಷತ್– ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಬಂಧಿಸಲಾಗಿತ್ತು.
ಅವರನ್ನು ಆರಂಭದಲ್ಲಿ ಗೃಹಬಂಧನದಲ್ಲಿ ಇರಿಸಲಾಗಿತ್ತು, ಆದರೆ ನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು ಮತ್ತು ನೆರೆಯ ನವಿ ಮುಂಬೈನ ತಲೋಜಾ ಜೈಲಿನಲ್ಲಿ ಇರಿಸಲಾಗಿದೆ.
ವಿಶೇಷ ನ್ಯಾಯಾಧೀಶ ರಾಜೇಶ್ ಜೆ ಕಟಾರಿಯಾ ಸೋಮವಾರ ನವ್ಲಾಖಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಸುಪ್ರೀಂಕೋರ್ಟ್ ಇತ್ತೀಚೆಗಷ್ಟೆ ಸಾಮಾಜಿಕ ಕಾರ್ಯಕರ್ತ, ಕವಿ ಪಿ. ವರವರ ರಾವ್ (82) ಅವರಿಗೆ ಇದೇ ಪ್ರಕರಣ ಸಂಬಂಧ ಜಾಮೀನು ನೀಡಿದೆ.