ನವದೆಹಲಿ, ಸೆ 05 (DaijiworldNews/HR): ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ನಿಂದ ಲೋಕಾಯುಕ್ತಕ್ಕೆ ಬಲ ನೀಡಿದ ಸಂಬಂಧ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದದು, ಈ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, 4 ವಾರಗಳ ಕಾಲ ಅರ್ಜಿಯ ವಿಚಾರಣೆ ಮುಂದೂಡಿಕೆ ಮಾಡಿದೆ.
ಸುಪ್ರೀಂ ಕೋರ್ಟ್ಗೆ ಎಸಿಬಿ ರದ್ದು ಸಂಬಂಧ ಸಲ್ಲಿಕೆಯಾಗಿದ್ದ ಖಾಸಗೀ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದ್ದು, ಎಸಿಬಿ ರದ್ದು ಪಡಿಸಿರೋ ಹೈಕೋರ್ಟ್ ಆದೇಶ ಸಂಬಂಧ ಕರ್ನಾಟಕ ಸರ್ಕಾರ ತನ್ನ ನಿಲುವನ್ನು ತಿಳಿಸುವಂತೆ ನೋಟಿಸ್ ಜಾರಿಗೊಳಿಸಿದೆ.
ಇನ್ನು ಕರ್ನಾಟಕ ಹೈಕೋರ್ಟ್ನಿಂದ ಕೆಲ ದಿನಗಳ ಹಿಂದೆ ಎಸಿಬಿಯನ್ನು ರದ್ದುಗೊಳಿಸಲಾಗಿದ್ದು, ಇಲ್ಲಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಸೂಚಿಸಲಾಗಿತ್ತು.