ಗುಜರಾತ್, ಸೆ 05 (DaijiworldNews/MS) : ಈ ಬಾರಿ ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಕ್ಷ ಅಧಿಕಾರ ಬಂದರೆ , ರೈತರ 3 ಲಕ್ಷದವರೆಗಿನ ಸಾಲ ಮನ್ನಾ, ಪ್ರಸ್ತುತ 1,000 ರೂ. ಬದಲಿಗೆ 500 ರೂ.ಗೆ ಎಲ್ಪಿಜಿ ಸಿಲಿಂಡರ್, ರೈತರಿಗೆ ಉಚಿತ ವಿದ್ಯುತ್ ಮತ್ತು ಸಾಮಾನ್ಯ ಗ್ರಾಹಕರಿಗೆ 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದ್ದಾರೆ.
ಅಹಮದಾಬಾದ್ನಲ್ಲಿ ಸೋಮವಾರ ಆಯೋಜಿಸಿದ್ದ ‘ಪರಿವರ್ತನ್ ಸಂಕಲ್ಪ ರ್ಯಾಲಿ’ಯನ್ನುದ್ದೇಶಿಸಿ ಮಾತನಾಡಿದ ಗಾಂಧಿ ಅವರು ಬೂತ್ ಮಟ್ಟದ ಕಾರ್ಯಕರ್ತರನ್ನುದ್ದೇಶಿಸಿ ಈ ಮಾತು ಹೇಳಿದರು.
ಗುಜರಾತ್ನ ಜನರಿಗೆ 10 ಲಕ್ಷ ಹೊಸ ಉದ್ಯೋಗಗಳ ಸೃಷ್ಟಿ, 3,000 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ನಿರ್ಮಿಸುವುದು ಮತ್ತು ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಸೇರಿದಂತೆ ಹಲವು ಭರವಸೆಗಳನ್ನು ನೀಡಿದ್ದಾರೆ
ಇದೇ ವೇಳೆ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ಎಷ್ಟೇ ತೊಂದರೆ ಕೊಟ್ಟರೂ ನಾವು ಒಗ್ಗಟ್ಟಾಗಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ ಗೆಹಲೋತ್ ಸೇರಿದಂತೆ ಗುಜರಾತ್ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.