ನವದೆಹಲಿ, ಸೆ 06 (DaijiworldNews/HR): ಅಬಕಾರಿ ನೀತಿ ಅನುಷ್ಠಾನದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಆರು ರಾಜ್ಯಗಳ ಪ್ರಮುಖ ನಗರಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಾಂದರ್ಭಿಕ ಚಿತ್ರ
ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ತೆಲಂಗಾಣ ಹಾಗೂ ಮಹಾರಾಷ್ಟ್ರಗಳ ನಗರಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇನ್ನು ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಆರೋಪಿಸಿದ್ದು, ಇದಕ್ಕೆ ಸಂಬಂಧಿಸಿದ ರಹಸ್ಯ ಕಾರ್ಯಾಚರಣೆಯ ವಿಡಿಯೊವೊಂದನ್ನು ಸೋಮವಾರ ಬಿಡುಗಡೆ ಮಾಡಿತ್ತು.