ನವದೆಹಲಿ, ಸೆ 06 (DaijiworldNews/HR): 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮುಂಬರುವ ಚುನಾವಣೆಯ ಬಳಿಕ ಭಾರತದಲ್ಲಿ ಬಿಜೆಪಿ ಹೊರತು ಪಡಿಸಿ ಬೇರೆ ಧ್ವಜ ರಾರಾಜಿಸಲಿದೆ. ಕೇಂದ್ರದಲ್ಲಿ ಪ್ರತಿಪಕ್ಷಗಳು ಅಧಿಕಾರಕ್ಕೆ ಬರುತ್ತವೆ ಎಂದರು.
ಇನ್ನು ಮೋದಿ ಸರ್ಕಾರ ಕೃಷಿ ಪಂಪ್ಸೆಟ್ಗಳಿಗೆ ಮೀಟರ್ಗಳನ್ನು ಅಳವಡಿಸುವಂತೆ ರೈತರಿಗೆ ಒತ್ತಾಯಿಸುತ್ತಿದೆ. ಆದರೆ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತವಾಗಿಯೇ ವಿದ್ಯುತ್ ನೀಡಲಾಗುತ್ತದೆ ಎಂದಿದ್ದಾರೆ.