ಶ್ರೀನಗರ್, ಸೆ 06 (DaijiworldNews/HR): ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪುಷ್ಕರಿ ಕಾನಿಲ್ವಾನ್ ಗ್ರಾಮದಲ್ಲಿ ಭದ್ರತಾ ಪಡೆಯ ಎನ್ ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಇಬ್ಬರು ಉಗ್ರರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ಸಂದರ್ಭದಲ್ಲಿ ಭದ್ರತಾ ಪಡೆಯ ಪ್ರತಿದಾಳಿಯಲ್ಲಿ ಇಬ್ಬರು ಹಿಜ್ಬುಲ್ ಉಗ್ರರು ಸಾವನ್ನಪ್ಪಿದ್ದಾರೆ.
ಇನ್ನು ಈ ಪ್ರದೇಶದಲ್ಲಿ ಹಿಜ್ಬುಲ್ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಆ ವೇಳೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ.