ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಇಂದು ರಾತ್ರಿ 10.30 ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.