ಮಂಡ್ಯ, ಸೆ 07 (DaijiworldNews/HR): ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಗ್ಯಾಂಗ್ರೀನ್ ಶಸ್ತ್ರಚಿಕಿತ್ಸೆ ಮಾಡಿ ಕತ್ತರಿಸಿದ್ದ ರೋಗಿಯ ಕಾಲನ್ನು ಮಣ್ಣು ಮಾಡುವಂತೆ ಪತ್ನಿ ಕೈಗೆ ಕೊಟ್ಟಿರುವ ಘಟನೆ ನಡೆದಿದೆ.
ಭಾಗ್ಯಮ್ಮ ಎಂಬುವರ ಪತಿ ಪ್ರಕಾಶ್ ಅವರ ಕಾಲಿಗೆ ಗ್ಯಾಂಗ್ರೀನ್ ಆಗಿದ್ದು, ಮಿಮ್ಸ್ನಲ್ಲಿ ಶಸ್ತ್ರಚಿಕಿತ್ಸೆ ಮಾಡಿದ್ದು, ಆತನ ಕಾಲನ್ನು ಕತ್ತರಿಸಿ ಕವರ್ನಲ್ಲಿ ಸುತ್ತಿ ಎಲ್ಲಾದರೂ ಮಣ್ಣು ಮಾಡುವಂತೆ ಪತ್ನಿಯ ಕೈಗೆ ಕೊಟ್ಟಾಗ ಭಾಗ್ಯಮ್ಮ ಅವರು ದಿಕ್ಕು ತೋಚದ ಅಳುತ್ತಾ ನಿಂತಿದ್ದರು. ಇದನ್ನು ಕಂಡ ಸಾರ್ವಜನಿಕರು ಮಿಮ್ಸ್ ಅಧಿಕಾರಿಗಳು, ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಮಿಮ್ಸ್ ನಿರ್ದೇಶಕ ಡಾ.ಬಿ.ಜೆ.ಮಹೇಂದ್ರ ಅವರು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಸಾರ್ವಜನಿಕರ ಆಕ್ರೋಶವೂ ಹೆಚ್ಚಾದ ಹಿನ್ನೆಲೆಯಲ್ಲಿ ಸಿಬ್ಬಂದಿ ಕಾಲನ್ನು ವಾಪಸ್ ಪಡೆದಿದ್ದಾರೆ.