ನವದೆಹಲಿ, ಸೆ 07 (DaijiworldNews/HR): ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯ ವಿರುದ್ದ ಕಾಂಗ್ರೆಸ್ ಪಕ್ಷ ಇಂದಿನಿಂದ ದೇಶಾದ್ಯಂತ 3,500 ಕಿಲೋ ಮೀಟರ್ ಸಂಚಾರ ನಡೆಸುವ ಭಾರತ್ ಜೋಡೋ ಯಾತ್ರೆಯನ್ನು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಿಸಿದೆ.
ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಯ ವಿರುದ್ದ ಕಾಂಗ್ರೆಸ್ ಪಕ್ಷ ವು 12 ರಾಜ್ಯಗಳಲ್ಲಿ 5 ತಿಂಗಳ ಕಾಲ ಭಾರತ್ ಜೋಡೋ ಯಾತ್ರೆಯನ್ನು ನಡೆಸಲಿದ್ದು, ಆ ಮೂಲಕ ದೇಶದ ಮೂಲೆ ಮೂಲೆಗಳಲ್ಲಿ ಜನರನ್ನು ಕಾಂಗ್ರೆಸ್ ಪಕ್ಷ ತಲುಪಲಿದೆ.
ಇನ್ನು ಇಂದು ಬೆಳಗ್ಗೆ ರಾಹುಲ್ ಗಾಂಧಿ ಹಾಗೂ ಇತರ ಕಾಂಗ್ರೆಸ್ ನಾಯಕರು ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸ್ಮಾರಕಕ್ಕೆ ತೆರಳಿ ನಮನ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ.
ರಾಹುಲ್ ಗಾಂಧಿಯವರು ತಮ್ಮ ತಂದೆಯ ಸ್ಮಾರಕ ಪಕ್ಕ ಗಿಡವೊಂದನ್ನು ನೆಟ್ಟಿದ್ದು, ಈ ವೇಳೆ ತಮಿಳುನಾಡು ಕಾಂಗ್ರೆಸ್ ಮುಖ್ಯಸ್ಥ ಕೆ ಎಸ್ ಅಳಗಿರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.