ಬಳ್ಳಾರಿ, ಸೆ 07 (DaijiworldNews/HR): ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಆಶಾ ಕಾರ್ಯಕರ್ತೆಯೊಬ್ಬರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕು ಎಮ್ಮಿಗನೂರು ಗ್ರಾಮದಲ್ಲಿ ನಡೆದಿದೆ.
ಮೃತ ಆಶ ಕಾರ್ಯಕರ್ತೆಯನ್ನು ಉಮಾದೇವಿ (44) ಎನ್ನಲಾಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ತಾತ್ರಿ ಹೊತ್ತು ನಿರಂತರ ಮಳೆ ಸುರಿಯುತ್ತಿದ್ದು, ಮಂಗಳವಾರ ರಾತ್ರಿಯೂ ಮಳೆ ಸುರಿದ ಪರಿಣಾಮ ಮನೆಯೊಳಗೆ ಮಲಗಿದ್ದಾಗ ಮಧ್ಯರಾತ್ರಿ 1.30ರ ಸುಮಾರಿಗೆ ಅಡುಗೆ ಕೋಣೆಯ ಅಡ್ಡಗೋಡೆ ಉಮಾದೇವಿ ಅವರ ಮೇಲೆ ಬಿದ್ದು ಮೃತಪಟ್ಟಿದ್ದಾರೆ.