ಮುಂಬೈ, ಸೆ 07 (DaijiworldNews/HR): ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ರಾತ್ರಿ ಊಟಕ್ಕೆ ಬಿರಿಯಾನಿ ಮಾಡಿಲ್ಲ ಎಂಬ ಕಾರಣಕ್ಕೆ ಕುಡಿದ ಮತ್ತಿನಲ್ಲಿದ್ದ ಪತ್ನಿಯನ್ನೇ ಪತಿ ಚಾಕುವಿನಿಂದ ಇರಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ವ್ಯಕ್ತಿ ಕುಡಿದ ಅಮಲಿನಲ್ಲಿ ಮನೆಗೆ ಬಂದು, ಊಟಕ್ಕೆ ಬಿರಿಯಾನಿ ಮಾಡದೇ ಇದ್ದುದಕ್ಕೆ ಪತ್ನಿಯೊಂದಿಗೆ ಜಗಳವಾಡಿದ್ದು, ಬಳಿಕ ಚಾಕು ತೆಗೆದುಕೊಂಡು ಆಕೆಗೆ ಇರಿದಿದ್ದಾನೆ.
ಇನ್ನು ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ಸಂಬಂಧ ಆರೋಪಿ ವಿಕ್ರಂ ವಿನಾಯಕ್ ದೇಡೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.