ಬೆಂಗಳೂರು, ಸೆ 07 (DaijiworldNews/HR): ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ್ದು ಕಾಂಗ್ರೆಸ್ ಎಂದು ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ್ದು ಕಾಂಗ್ರೆಸ್. ಅದೇ ಕಾಂಗ್ರೆಸ್ ಈಗ ಭಾರತ್ ಜೋಡೋ ಎಂಬ ಬೃಹನ್ನಾಟಕ ಮಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಭಾರತವನ್ನು ಜೋಡಿಸುವ ಆಸೆಯಿದ್ದರೆ, ಪಾಕಿಸ್ತಾನದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಲಿ' ಎಂದಿದೆ.
ಇನ್ನು ಭಾರತ ಒಗ್ಗೂಡಿಸಿ(ಭಾರತ್ ಜೋಡೋ) ಯಾತ್ರೆಯು ಇಂದು (ಸೆ. 7) ಆರಂಭವಾಗಿದ್ದು, ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ದೆಹಲಿ, ಪಂಜಾಬ್, ಚಂಡೀಗಡ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಹಾದುಹೋಗಲಿದೆ.