ನವದೆಹಲಿ, ಸೆ 07 (DaijiworldNews/DB): ಕೇಂದ್ರ ಸಚಿವ ಸಂಪುಟದಲ್ಲಿ ಇಂದು ಪಿಎಂ-ಶ್ರೀ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಯೋಜನೆಯಡಿ ದೇಶಾದ್ಯಂತ 14,500 ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಗುರಿ ಹೊಂದಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾಹಿತಿ ನೀಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಧಾನ ಮಂತ್ರಿ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (ಪಿಎಂ-ಶ್ರೀ) ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಶಿಕ್ಷಕರ ದಿನದಂದು ಘೋಷಿಸಿದ್ದು, ಇದು ಎನ್ಇಪಿಯ ಪ್ರಯೋಗವಾಗಲಿದೆ ಎಂದು ತಿಳಿಸಿದ್ದರು. ಇದೀಗ ಈ ಯೋಜನೆಗೆ ಅನುಮೋದನೆಯನ್ನೂ ನೀಡಲಾಗಿದೆ. ಈ ಯೋಜನೆಯಡಿ ಕೇಂದ್ರೀಯ ವಿದ್ಯಾಲಯಗಳು ಮತ್ತು ನವೋದಯ ವಿದ್ಯಾಲಯಗಳಲ್ಲಿ 14,000 ಕ್ಕೂ ಹೆಚ್ಚು ಶಾಲೆಗಳನ್ನು ಪಿಎಂ-ಶ್ರೀ ಶಾಲೆಗಳಾಗಿ ಬಲಪಡಿಸಲು ಉದ್ದೇಶಿಸಲಾಗಿದೆ ಎಂದರು.
ಭವಿಷ್ಯಕ್ಕಾಗಿ ವಿದ್ಯಾರ್ಥಿಗಳನ್ನು ಸಿದ್ದಪಡಿಸುವುದು ಈ ಯೋಜನೆಯ ಉದ್ದೇಶ. ಇದರಲ್ಲಿ ಆಧುನಿಕ, ಪರಿವರ್ತನಾತ್ಮಕ ಮತ್ತು ಸಮಗ್ರ ವಿಧಾನ ಹೊಂದಿರುವ ಶಿಕ್ಷಣ ಒಳಗೊಳ್ಳಲಿದೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಸಿಗಲಿದೆ ಎಂದು ಪ್ರಧಾನಿ ಮೋದಿ ಈ ಹಿಂದೆ ಹೇಳಿದ್ದರು.
ಕೇಂದ್ರ ಸಚಿವ ಅನುರಾಗ್ ಠಾಕೂರ್ ಉಪಸ್ಥಿತರಿದ್ದರು.