ನವದೆಹಲಿ, ಸೆ 09 (DaijiworldNews/MS): ಪ್ರವಾದಿಯ ಕುರಿತಾದ ಹೇಳಿಕೆಗಳಿಗಾಗಿ ಬಿಜೆಪಿಯ ಮಾಜಿ ವಕ್ತಾರ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
“ನಿರ್ದೇಶನಗಳನ್ನು ನೀಡುವಾಗ ನ್ಯಾಯಾಲಯವು ಸೂಕ್ಷ್ಮವಾಗಿರಬೇಕು ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಅಭಿಪ್ರಾಯದ ಬಳಿಕ ಅರ್ಜಿದಾರರು ತಮ್ಮ ಅರ್ಜಿಯನ್ನು ಹಿಂತೆಗೆದುಕೊಂಡರು.
ಅರ್ಜಿದಾರರು, ನೂಪುರ್ ಶರ್ಮಾ ಅವರ ಹೇಳಿಕೆಗಳಿಂಡ ಮುಸ್ಲಿಂ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಅವರನ್ನು ಬಂಧಿಸಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿದ್ದರು.
ಟಿವಿ ವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ನೂಪುರ್ ಶರ್ಮಾ ಆಕ್ಷೇಪಾರ್ಹ ಹೇಳಿಕೆಗಳನ್ನ ನೀಡಿದ್ದರು, ಇದು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗೆ ಕಾರಣವಾಗಿತ್ತು. ಬಿಜೆಪಿಯೂ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು. ಜುಲೈ 1 ರಂದು ಸುಪ್ರೀಂಕೋರ್ಟ್ ನ ಪೀಠವು ನೂಪುರ್ ಹೇಳಿಕೆಗಳನ್ನ ತೀವ್ರವಾಗಿ ಖಂಡಿಸಿತ್ತು. ಆಗಸ್ಟ್ʼನಲ್ಲಿ, ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾಗೆ ಸುಪ್ರೀಂಕೋರ್ಟ್ ದೊಡ್ಡ ರಿಲೀಫ್ ನೀಡಿತ್ತು. ನೂಪುರ್ ಶರ್ಮಾ ವಿರುದ್ಧ ದೇಶದ ವಿವಿಧ ರಾಜ್ಯಗಳಲ್ಲಿ ದಾಖಲಾದ ಎಲ್ಲಾ ಎಫ್ಐಆರ್ಗಳನ್ನ ನ್ಯಾಯಾಲಯವು ಮುಟ್ಟುಗೋಲು ಹಾಕಿಕೊಂಡು ಅವುಗಳನ್ನ ದೆಹಲಿಗೆ ವರ್ಗಾಯಿಸಿತ್ತು.