ಬೆಂಗಳೂರು, ಸೆ 10 (DaijiworldNews/HR): ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಅಧಿಸೂಚನೆ ಹೊರಡಿಸಿದ್ದು, ಲೋಕಾಯುಕ್ಕೆ ಪೊಲೀಸ್ ಠಾಣಾಧಿಕಾರ ನೀಡಿದೆ.
ಆಗಸ್ಟ್ 11ರಂದು ಎಸಿಬಿಯನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದು, ಇದೀಗ ಹೈಕೋರ್ಟ್ ತೀರ್ಪಿನಲ್ಲಿನ ಅಂಶಗಳನ್ನುರಾಜ್ಯ ಸರ್ಕಾರ ಪರಿಶೀಲನೆ ನಡೆಸಿ ಅಧಿಸೂಚನೆ ನೀಡಿದೆ.
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ರದ್ದುಗೊಳಿಸಿದ್ದು, ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ತಡೆ ಅಧಿನಿಯಮ ಸಂಪೂರ್ಣ ಅಧಿಕಾರ ನೀಡಿದ್ದು, ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಪೊಲೀಸ್ ಠಾಣಾಧಿಕಾರ ನೀಡಲಾಗಿದೆ ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಇನ್ನು ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಈಗ ಬಾಕಿಯಿರುವ ತನಿಖೆಗಳು ವಿಚಾರಣೆಗಳು ಸೇರಿದಂತೆ ಇತರೆ ಶಿಸ್ತು ಪ್ರಕರಣಗಳು ಹಾಗೂ ಖಾಸಗಿ ದೂರುದಾರರ ಪ್ರಕರಣಗಳನ್ನು ಸಂಪೂರ್ಣವಾಗಿ ಲೋಕಾಯುಕ್ತಕ್ಕೆ ವರ್ಗಾಯಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.