ವಿಜಯನಗರಂ, ಸೆ 10 (DaijiworldNews/HR): ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ಪರೀಕ್ಷೆ ಬರೆಯಲು ಹೋಗಲು 21 ವರ್ಷದ ಯುವತಿಯೊಬ್ಬರು ಉಕ್ಕಿ ಹರಿಯುತ್ತಿದ್ದ ನದಿಯನ್ನು ಈಜಿ ದಾಟಿರುವ ಘಟನೆ ನಡೆದಿದೆ.
ಕಲಾವತಿ ಎಂಬ ವಿದ್ಯಾರ್ಥಿನಿ ಪರೀಕ್ಷೆ ಬರೆಯುವುದಕ್ಕಾಗಿ ಶುಕ್ರವಾರ ಚಂಪಾವತಿ ನದಿಯನ್ನು ಈಜಿದ್ದಾರೆ.
ಇಂದು ನಡೆಯಬೇಕಿದ್ದ ಪರೀಕ್ಷೆಗೆ ಹಾಜರಾಗಲೆಂದು ಜೀವವನ್ನೇ ಪಣಕ್ಕಿಟ್ಟು ಕಲಾವತಿ ತನ್ನ ಇಬ್ಬರು ಸಹೋದರರ ನೆರವಿನೊಂದಿಗೆ ಪ್ರವಾಹಕ್ಕೆ ಸಿಲುಕಿದ ಚಂಪಾವತಿ ನದಿಯನ್ನು ದಾಟಿದ್ದಾಳೆ.
ಇನ್ನು ಭಾರೀ ಮಳೆಯಿಂದಾಗಿ, ಆಂಧ್ರ ಪ್ರದೇಶದ ಉತ್ತರ ಕರಾವಳಿಯ ಹಲವಾರು ನದಿಗಳು ತುಂಬಿ ಹರಿಯುತ್ತಿದೆ.