ಬೆಂಗಳೂರು, ಸೆ 10 (DaijiworldNews/MS): ಬಿಜೆಪಿ ಇಂದು ದೊಡ್ಡ ಬಳ್ಳಾಪುರದಲ್ಲಿ ನಡೆಸುತ್ತಿರುವ ಜನಸ್ಪಂದನ ಸಮಾವೇಶದ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮೂಲಕ ಟೀಕಿಸಿದೆ. 'ಬಿಜೆಪಿ ಮಾಡುತ್ತಿರುವುದು ಜನಸ್ಪಂದನ ಸಮಾವೇಶವಲ್ಲ. ಕಮಿಷನ್ ಸಮಾವೇಶ ’ಎಂದು ಲೇವಡಿ ಮಾಡಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಕಾಂಗ್ರೆಸ್ , ಸರ್ಕಾರ ಪರ್ಸೆಂಟೇಜ್ ಮೇಲೆ ನಡೆಯುತ್ತಿದೆಯೇ?, ಗುತ್ತಿಗೆದಾರರು, ಜನಸಾಮಾನ್ಯರ ನಂತರ ಹೈಕೋರ್ಟ್ ಕೂಡ 40% ಸರ್ಕಾರದ ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿದೆ. ಬಿ.ಎಸ್. ಬೊಮ್ಮಾಯಿ ಅವರೇ, ಬಿಜೆಪಿ ಭ್ರಷ್ಟೋತ್ಸವದ ಇಂತಹ ನಾಚಿಕೆಗೇಡಿನ ಸಂಗತಿ ಎದುರಿಟ್ಟುಕೊಂಡು ಯಾವ ಪುರುಷಾರ್ಥಕ್ಕೆ ಸಮಾವೇಶ ನಡೆಸುತ್ತಿದ್ದೀರಿ? ನಾಡಿನ ಎದುರು ತಲೆ ತಗ್ಗಿಸಬೇಕಾದ ಸಮಯವಿದು ಎಂದು ಹೇಳಿದೆ
ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ "ಕಮಿಷನ್ ಸಮಾವೇಶ" 40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ.ಬಿ.ಎಸ್ ಬೊಮ್ಮಾಯಿ ಅವರೇ? ನಿಮ್ಮದೇ ಪಕ್ಷದ ಕಾರ್ಯಕರ್ತ & ಗುತ್ತಿಗೆದಾರ ಸಂತೋಷ್ ಪಾಟೀಲ್ರನ್ನು ಕಮಿಷನ್ ಕಿರುಕುಳದಲ್ಲಿ ಕೊಂದಿದ್ದನ್ನು ಹೇಳಿಕೊಳ್ಳುವಿರಾ ಎಂದು ಎಂದು ಕೇಳಿದೆ
ಗುತ್ತಿಗೆದಾರರು ಸರ್ಕಾರದ ಕಮಿಷನ್ ಕಿರುಕುಳದ ಬಗ್ಗೆ ಪ್ರಧಾನಿಗೆ ಪತ್ರ ಬರೆದರೂ ಪ್ರಯೋಜನವಿಲ್ಲ, ಪತ್ರಿಕಾಗೋಷ್ಠಿ ನಡೆಸಿದರೂ ಉಪಯೋಗವಿಲ್ಲ, 40% ಕಮಿಷನ್ ಲೂಟಿ ನಿಂತೇ ಇಲ್ಲ. ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ನಿಮ್ಮ ಸರ್ಕಾರದ ಸಾಧನೆ ಏನು ಬಿ.ಎಸ್ ಬೊಮ್ಮಾಯಿ ಅವರೇ? ಅಕ್ರಮಗಳನ್ನು ಮುಚ್ಚಿಕೊಳ್ಳುವುದೇ ಸಾಧನೆಯೇ? ಎಂದು ಪ್ರಶ್ನಿಸಿದೆ