ರಾಜಸ್ಥಾನ, ಸೆ 10 (DaijiworldNews/DB): ಗುಡಮಲಾನಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಧಾರಿ-ಸಂಚೋರ್ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್ ನಡುವೆ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಕಾರಿನಲ್ಲಿದ್ದವರು ಗುಜರಾತ್ ಮೂಲದವರು ಎಂದು ತಿಳಿದು ಬಂದಿದೆ. ಇವರೆಲ್ಲರೂ ಜೈಸಲ್ಮೇರ್ನಲ್ಲಿರುವ ರಾಮ ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುಡಮಲಾನಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.