ದೊಡ್ಡಬಳ್ಳಾಪುರ, ಸೆ 10 (DaijiworldNews/HR): ಕಾಂಗ್ರೆಸ್ನವರಿಗೆ ತಾಕತ್ತಿದ್ದರೆ ನಾವು ಅಧಿಕಾರಕ್ಕೆ ಬರುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಬಸವರಾಜ್ ಜೊಮ್ಮಾಯಿ ಸವಾಲು ಹಾಕಿದ್ದಾರೆ.
ಬಿಜೆಪಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷವು 2023ರ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು, ವಿಧಾನಸೌಧದ ಮೂರನೇ ಮಹಡಿಯಲ್ಲಿ ಬಿಜೆಪಿಯ ವಿಜಯ ಕೇಳಿಸಲಿದೆ ಎಂದರು.
ಇನ್ನು ಕೊರೊನಾ ಸಮಯದಲ್ಲಿ ರಾಜ್ಯದಲ್ಲಿ ಸಾಕಷ್ಟು ತೊಂದರೆಯಾಗಿದ್ದು, ಬಿಎಸ್ವೈ ನೇತೃತ್ವದಲ್ಲಿ ಸಮರ್ಥವಾಗಿ ಎದುರಿಸಿದ್ದೇವು. ಕೇಂದ್ರದಲ್ಲೂ ಮೋದಿ ನೇತೃತ್ವದಲ್ಲಿ 138 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿದ್ದೇವು. ಕಾಂಗ್ರೆಸ್ ಅಧಿಕಾರದಲ್ಲಿದ್ದರೇ ಜನರನ್ನು ನರಕಕ್ಕೆ ತಳ್ಳುತ್ತಿದ್ದರು ಎಂದಿದ್ದಾರೆ.
ನಮ್ಮ ಕಾಲದಲ್ಲಿ ಹಿರಿಯ ಅಧಿಕಾರಿಯಿದ್ದರು ಕ್ರಮವನ್ನು ಕೈಗೊಂಡಿದ್ದೇವೆ. ಕಾಂಗ್ರೆಸ್ ನ ದುಷ್ಟ ನಾಟಕ ಕರ್ನಾಟಕದಲ್ಲಿ ನಡೆಯುವುದಿಲ್ಲ. 2023ಕ್ಕೆ ಈ ನಾಟಕಕ್ಕೆ ತೆರೆ ಎಳೆಯಬೇಕು ಎಮ್ದು ಹೇಳಿದ್ದಾರೆ.