ಬೆಂಗಳೂರು, ಸೆ 10 (DaijiworldNews/SM): 'ಸೆಪ್ಟೆಂಬರ್ 26 ರಂದು ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭ ಆಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚೊಚ್ಚಲ ಬಾರಿಗೆ ದಸರಾ ಉದ್ಘಾಟನೆ ಮಾಡಲಿದ್ದಾರೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಯಾರನ್ನು ಆಹ್ವಾನಿಸುವುದು ಎಂಬುದರ ಬಗ್ಗೆ ಸಭೆ ನಡೆಸಿ ಚರ್ಚೆ ಮಾಡಲಾಗಿತ್ತು. ಸಭೆಯ ಬಳಿಕ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿರುವುದಾಗಿ ಇಂದು ಪತ್ರ ಬಂದಿದೆ ಎಂದು ತಿಳಿಸಿದ್ದಾರೆ.