ಹೈದರಾಬಾದ್, ಸೆ 11 (DaijiworldNews/HR): ಟಾಲಿವುಡ್ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ತೆಲುಗಿನ ಹಿರಿಯ ನಟ ಉಪ್ಪಲಪತಿ ಕೃಷ್ಣಂ ರಾಜು(82) ಅವರು ಹೈದರಾಬಾದ್ನಲ್ಲಿ ನಿಧನರಾಗಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ರಾಜು ಅವರು ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲ್ತೂರಿನಲ್ಲಿ 20 ಜನವರಿ 1940 ರಂದು ಜನಿಸಿದ್ದು, ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಇನ್ನು ಕೃಷ್ಣಂ ರಾಜು ಅವರು ನಟ ಪ್ರಭಾಸ್ ಅವರ ಚಿಕ್ಕಪ್ಪ ಆಗಿದ್ದು, ತೆಲುಗಿನಲ್ಲಿ 190ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.