ಕೊಚ್ಚಿ, ಸೆ 11 (DaijiworldNews/HR): ದುಬೈನಿಂದ ಬಂದಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಬಳಿಕ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಮೃತರನ್ನು ಮಿನಿ (56) ಎಂದು ಗುರುತಿಸಲಾಗಿದೆ.
ಮಿನಿ ಅವರು ದುಬೈನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದು, ಹಾರಾಟದ ಸಮಯದಲ್ಲಿ ಪ್ರಜ್ಞಾಹೀನರಾಗಿದ್ದರು. ವಿಮಾನ ಲ್ಯಾಂಡ್ ಆದ ಬಳಿಕ ಆಕೆಯನ್ನು ಕೊಚ್ಚಿಯ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಇಂದು ಸಾವನ್ನಪ್ಪಿದ್ದಾರೆ.