ಶ್ರೀನಗರ, ಸೆ 11 (DaijiworldNews/HR): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ಸಂವಿಧಾನದ 370 ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ ಎಂದು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮತಗಳಿಗಾಗಿ, ನಾನು ನಿಮ್ಮನ್ನು ದಾರಿತಪ್ಪಿಸುವುದಿಲ್ಲ. ದಯವಿಟ್ಟು ಮಾಡಲಾಗದ ಸಮಸ್ಯೆಗಳನ್ನು ಎತ್ತಬೇಡಿ. 370 ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ ಎಂದರು.
ಇನ್ನು ಆಗಸ್ಟ್ 26 ರಂದು ಕಾಂಗ್ರೆಸ್ ತೊರೆದ ಆಜಾದ್, 10 ದಿನಗಳಲ್ಲಿ ತಮ್ಮ ಹೊಸ ರಾಜಕೀಯ ಪಕ್ಷದ ರಚನೆಯನ್ನು ಘೋಷಿಸುವುದಾಗಿ ಹೇಳಿದ್ದಾರೆ.