ಪಾಟ್ನಾ, ಸೆ 12 (DaijiworldNews/HR): ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ಹೊಟ್ಟೆನೋವಿನ ಚಿಕಿತ್ಸೆಗಾಗಿ ಖಾಸಗಿ ಕ್ಲಿನಿಕ್ಗೆ ದಾಖಲಾಗಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡುವ ನೆಪದಲ್ಲಿ ಎರಡೂ ಕಿಡ್ನಿಗಳನ್ನು ವೈದ್ಯರು ಕದ್ದಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮಹಿಳೆಯು ಆಸ್ಪತ್ರೆಯಿಂದ ವಾಪಸಾದ ಬಳಿಕ ಆರೋಗ್ಯ ತೀವ್ರವಾಗಿ ಕ್ಷೀಣಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು ಈ ವೇಳೆ ಪರೀಕ್ಷಿಸಿದ ವೈದ್ಯರು ಮಹಿಳೆಯ ಎರಡು ಕಿಡ್ನಿಗಳನ್ನು ತೆಗೆದಿರುವುದನ್ನು ಕುಟುಂಬಸ್ಥರಿಗೆ ತಿಳಿಸಿದ್ದಾರೆ.
ಇನ್ನು ಮಹಿಳೆ ಕುಟುಂಬಸ್ಥರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಬರಿಯಾರ್ಪುರ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.