ಪಣಜಿ, ಸೆ 12 (DaijiworldNews/HR): ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಕೊಲೆ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಸೋನಾಲಿ ಫೋಗಟ್ ಕುಟುಂಬ ಸದಸ್ಯರು ಭಾನುವಾರ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿಯಾಗಿ ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.
ಇನ್ನು ಸೋನಾಲಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾರ ಪೊಲೀಸರಿಗೆ ಬಲವಾದ ಸಾಕ್ಷ್ಯಾಧಾರಗಳು ಸಿಕ್ಕಿದ್ದು, ಪ್ರಕರಣದ ಬಗ್ಗೆ ಫೋಗಟ್ ಮಗಳು ಮತ್ತು ಕುಟುಂಬ ಸದಸ್ಯರು ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು ಎಂದು ವರದಿ ಹೇಳಿದೆ.