ಉತ್ತರಪ್ರದೇಶ, ಸೆ 12 (DaijiworldNews/MS): ಉತ್ತರಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ - ಶೃಂಗಾರ ಗೌರಿ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಇಂದು ಹೊರಬಿದ್ದಿದೆ. ಸ್ಥಳೀಯ ಜಿಲ್ಲಾ ಕೋರ್ಟ್ ಈ ಬಗ್ಗೆ ಸೋಮವಾರ ಆದೇಶ ಪ್ರಕಟಿಸಿದ್ದು, ಹಿಂದೂಗಳ ಅರ್ಜಿಯನ್ನು ಪುರಸ್ಕರಿಸಿ ತೀರ್ಪು ನೀಡಿದೆ.
ಜ್ಞಾನವಾಪಿ ಮಸೀದಿ, ಶೃಂಗಾರ ಗೌರಿ ಪ್ರಕರಣದ ಕುರಿತು ವಿಚಾರಣೆ ಮಾಡಬೇಕೇ, ಬೇಡವೇ ಎಂಬ ಬಗ್ಗೆ ವಾರಾಣಸಿ ಜಿಲ್ಲಾ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಸ್ಲಿಂ ಅರ್ಜಿದಾರರ ಆಕ್ಷೇಪಣೆಯನ್ನು ಕೋರ್ಟ್ ತಿರಸ್ಕರಿಸಿದೆ. ಹೀಗಾಗಿ ಹಿಂದೂಗಳ ಪರ ಅರ್ಜಿದಾರರಿಗೆ ಮೊದಲ ಗೆಲುವು ಸಿಕ್ಕಂತಾಗಿದೆ.
ಜಿಲ್ಲಾ ಕೋರ್ಟ್ ನ ನ್ಯಾಯಾಧೀಶರಾದ ಎ.ಕೆ.ವಿಶ್ವೇಶ್ ಅವರು ಮಸೀದಿ ಆವರಣದಲ್ಲಿರುವ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಅರ್ಜಿಯ ವಿಚಾರಣೆ ನಡೆಯಲಿದ್ದು, ಜಿಲ್ಲಾ ಕೋರ್ಟ್ ಸೆಪ್ಟೆಂಬರ್ 22ಕ್ಕೆ ವಿಚಾರಣೆ ಮುಂದೂಡಿದೆ.
ಮಸೀದಿ ಆವರಣದಲ್ಲಿರುವ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಅರ್ಜಿಯ ವಿಚಾರಣೆ ನಡೆಯಲಿದ್ದು, ಜಿಲ್ಲಾ ಕೋರ್ಟ್ ಸೆಪ್ಟೆಂಬರ್ 22ಕ್ಕೆ ವಿಚಾರಣೆ ಮುಂದೂಡಿದೆ.
ಜ್ಞಾನವಾಪಿ ಮತ್ತು ಶೃಂಗಾರ ಗೌರಿಯ ಪೂಜೆ ಮಾಡಲು ಹಿಂದೂಗಳಿಗೆ ಅನುಮತಿ ನೀಡಬೇಕು ಎಂದು ಹಿಂದೂಗಳ ಪರವಾಗಿ ನಾಲ್ವರು ಮಹಿಳೆಯರು ನ್ಯಾಯಾಲಯದಲ್ಲಿ ಈ ಬೇಡಿಕೆಯನ್ನು ಸಲ್ಲಿಸಿದ್ದರು.