ಶೋಪಿಯಾನ್, 12 (DaijiworldNews/HR): ಭದ್ರತಾ ಪಡೆಯು ಓರ್ವ ಉಗ್ರನನ್ನು ಎನ್ಕೌಂಟರ್ ನಡೆಸಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹೈಫ್ ಶರ್ಮಲ್ ಪ್ರದೇಶದಲ್ಲಿ ನಡೆದಿದೆ.
ಶೋಪಿಯಾನ್ನ ಹೈಫ್ ಶಿರ್ಮಲ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಉಗ್ರನನ್ನು ಸೆದೆಬಡಿಯಲಾಗಿದೆ.
ಇನ್ನು ಪೊಲೀಸರು ಮತ್ತು ಭದ್ರತಾ ಪಡೆಗಳ ಯೋಧರು ಉಗ್ರರ ಅಡಗು ತಾಣಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.