ಹೈದರಾಬಾದ್, ಸೆ 13 (DaijiworldNews/HR): ಹೈದರಾಬಾದ್ನ ಸಿಕಂದರಾಬಾದ್ ಹೋಟೆಲ್ನಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.
ಎಲೆಕ್ಟ್ರಿಕ್ ವೆಹಿಕಲ್ ಶೋರಂನಲ್ಲಿ ಬ್ಯಾಟರಿ ಸ್ಪೋಟಗೊಂಡು ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದ್ದು, ಈ ವೇಳೆ ಹೋಟೆಲ್ನಲ್ಲಿದ್ದ ಮಹಿಳೆ ಸೇರಿದಂತೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿ, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದಾಗ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.
ಇನ್ನು ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.