ವಿಜಯನಗರ, ಸೆ 13 (DaijiworldNews/DB): ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ಆತನ ಪ್ರಾಣ ರಕ್ಷಣೆ ಬದಲಾಗಿ ಸಾರ್ವಜನಿಕರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಅಮಾನವೀಯ ಘಟನೆ ವಿಜಯನಗರದಲ್ಲಿ ನಡೆದಿದೆ.
ಮಂಜುನಾಥ್ (25) ಆತ್ಮಹತ್ಯೆಗೆ ಶರಣಾದ ಯುವಕ. ಈತ ಹನುಮನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಫ್ಲೈಓವರ್ ಮೇಲಿರುವ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ನೇಣು ಹಾಕಿಕೊಳ್ಳುವುದನ್ನು ಅಲ್ಲಿದ್ದ ಸಾರ್ವಜನಿಕರು ವೀಡಿಯೋ ಮಾಡಿಕೊಂಡಿದ್ದಾರೆ. ಆದರೂ ಯಾರೂ ಆತನ ಪ್ರಾಣ ರಕ್ಷಣೆಗೆ ಮುಂದಾಗಿಲ್ಲ. ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿರುವುದು ವೀಡಿಯೋದಲ್ಲಿದೆ.
ಒಂದು ವೇಳೆ ಸಾರ್ವಜನಿಕರು ವೀಡಿಯೋ ಮಾಡದೆ ಆತನ ರಕ್ಷಣೆಗೆ ಮುಂದಾಗಿದ್ದರೆ ಆತ ಸಾಯುವುದನ್ನು ತಪ್ಪಿಸಬಹುದಿತ್ತು. ಆದರೆ ಡಿಜಿಟಲ್ ಯುಗದಲ್ಲಿ ಮರೆಯಾದ ಮಾನವೀಯತೆಗೆ ಈ ಘಟನೆ ಸಾಕ್ಷಿಯಾಗಿ ನಿಂತಿದೆ.