ಅಮೃತಸರ, ಸೆ 13 (DaijiworldNews/HR): ಪಾಕಿಸ್ತಾನದ ಜೈಲಿನಲ್ಲಿ 2013ರಲ್ಲಿ ಮೃತಪಟ್ಟ ಭಾರತೀಯ ಪ್ರಜೆ ಸರಬ್ಜಿತ್ ಸಿಂಗ್ ಅವರ ಪತ್ನಿ ಸುಖಪ್ರೀತ್ ಕೌರ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸುಖಪ್ರೀತ್ ಕೌರ್ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರೆಯಾಗಿ ಪ್ರಯಾಣಿಸುತ್ತಿದ್ದಾಗ ಫತೇಪುರ್ ಬಳಿ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದು, ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಇನ್ನು ಭಯೋತ್ಪಾದನೆ ಮತ್ತು ಬೇಹುಗಾರಿಕೆಯ ಆರೋಪದಲ್ಲಿ ಪಾಕ್ ಜೈಲಿನಲ್ಲಿದ್ದ ಸರಬ್ಜಿತ್ ಸಿಂಗ್ (49) ಏಪ್ರಿಲ್ 2013 ರಲ್ಲಿ ಲಾಹೋರ್ ಜೈಲಿನಲ್ಲಿ ಕೈದಿಗಳ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದರು.