ಮುಂಬೈ, ಸೆ 13 (DaijiworldNews/DB): ಕಾರೊಂದು ಬೆಂಕಿಯಾಗುತ್ತಿರುವುದನ್ನು ಕಂಡ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕೂಡಲೇ ಕಾರಿನಲ್ಲಿದ್ದವರ ಸಹಾಯಕ್ಕೆ ಧಾವಿಸಿ ಮಾನವೀಯತೆ ಮೆರೆದಿದ್ದಾರೆ.
ಮುಂಬೈಯ ವೆಸ್ಟರ್ನ್ ಎಕ್ಸ್ಪ್ರೆಸ್ ಹೆದ್ದಾರಿ ಬಳಿ ಸೋಮವಾರ ರಾತ್ರಿ ಬೆಂಕಿ ಹತ್ತಿಕೊಂಡು ಉರಿಯುತ್ತಿತ್ತು. ಈ ವೇಳೆ ಅದೇ ರಸ್ತೆಯಲ್ಲಿ ಶಿಂಧೆ ಅವರು ಸಂಚರಿಸುತ್ತಿದ್ದರು. ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದ ಕಾರನ್ನು ಕಂಡ ಮಹಾ ಸಿಎಂ ಕೂಡಲೇ ತಮ್ಮ ಬೆಂಗಾವಲು ವಾಹನವನ್ನು ನಿಲ್ಲಿಸಿ ಕಾರಿನಲ್ಲಿದ್ದವರ ಸಹಾಯಕ್ಕೆ ಧಾವಿಸಿದ್ದಾರೆ. ಅಲ್ಲದೆ, ಅಗತ್ಯವಿರುವ ಎಲ್ಲಾ ಸಹಾಯವನ್ನು ಅಧಿಕಾರಿಗಳು ನೀಡುತ್ತಾರೆ ಎಂದು ಕಾರಿನ ಮಾಲಕರಿಗೆ ಭರವಸೆ ನೀಡಿದರು ಎಂದು ತಿಳಿದು ಬಂದಿದೆ.
ಶಿಂಧೆ ಅವರು ತಮ್ಮ ಕಾರನ್ನು ನಿಲ್ಲಿಸಿ ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರಿನಲ್ಲಿದ್ದವರ ರಕ್ಷಣೆಗೆ ಧಾವಿಸಿರುವುದು ಮತ್ತು ಸಹಾಯದ ಭರವಸೆ ನೀಡಿರುವುದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.