ಚಿತ್ರದುರ್ಗ, ಸೆ 13 (DaijiworldNews/HR): ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯ ಬುಧವಾರ(ಸಪ್ಟಂಬರ್ 14)ಕ್ಕೆ ಮುಂದೂಡಲಾಗಿದೆ.
ಶಿವಮೂರ್ತಿ ಶರಣರು ಫೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ನಾಳೆಗೆ ನ್ಯಾಯಾಂಗ ಬಂಧನ ಮುಕ್ತಾಯವಾಗಲಿದೆ. ಆದರೆ ಜಾಮೀನು ಸಿಗಲಿದೆಯೇ ಎನ್ನುವುದನ್ನು ಕಾದುನೋಡಬೇಕಿದೆ.
ಇನ್ನು ಜಾಮೀನಿಗೆ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದು, ಪೋಕ್ಸೋ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಪರಮಶಿವಯ್ಯ ಮತ್ತು ಬಸವಾದಿತ್ಯ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ.