ಚಿತ್ರದುರ್ಗ, ಸೆ 14 (DaijiworldNews/MS): ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ತಿರಸ್ಕೃತವಾಗಿದೆ.
ಇಂದು ಚಿತ್ರದುರ್ಗದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ ಕೆ ಕೋಮಲಾ ವಿಚಾರಣೆ ನಡೆಸಿ ತೀರ್ಪು ನೀಡಿದ್ದು, ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿದೆ.
ಈ ಹಿನ್ನಲೆಯಲ್ಲಿ ಡಾ. ಶಿವಮೂರ್ತಿ ಶ್ರೀಗಳು ಸೆಪ್ಟಂಬರ್ 27ರ ತನಕ ನ್ಯಾಯಾಂಗ ಬಂಧನದಲ್ಲಿರಬೇಕಿದೆ. ವಾರ್ಡನ್, ರಶ್ಮಿಯ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡಿದ್ದು, ಹೈಕೋರ್ಟ್ನಲ್ಲಿ ಬೇಲ್ ಗಾಗಿ ಅರ್ಜಿ ಹಾಕುವ ಸಾಧ್ಯತೆ ಇದೆ