ಅಹ್ಮದಾಬಾದ್ , ಸೆ 14 (DaijiworldNews/MS): ಗುಜರಾತ್ ನ ಅಹ್ಮದಾಬಾದ್ ನಲ್ಲಿ ಭೀಕರ ದುರಂತವೊಂದು ನಡೆದಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿನ ಲಿಫ್ಟ್ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಅಹದಾಬಾದ್ ನ ಗುಜರಾತ್ ವಿಶ್ವವಿದ್ಯಾಲಯದ ಬಳಿ ನಿರ್ಮಾಣ ಹಂತದಲ್ಲಿರುವ ಆಸ್ಪೈರ್-2 ಹೆಸರಿನ ಕಟ್ಟಡದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಏಕಾಏಕಿ ಏಳನೇ ಮಹಡಿಯ ಲಿಫ್ಟ್ ಮುರಿದು ಬಿದ್ದಿದೆ. ಈ ದುರಂತದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ .
ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಆಡಳಿತ ಮತ್ತು ಅಹಮದಾಬಾದ್ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದು, ಅವರು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ.