ಬೆಂಗಳೂರು, ಸೆ 15 (DaijiworldNews/HR): ಕನ್ನಡ ಕಿರುತೆರೆಯ ಖ್ಯಾತ ನಟ ಮಂಡ್ಯ ರವಿ(ರವಿ ಪ್ರಸಾದ್ ಎಂ)(42) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ನಿಧನರಾಗಿದ್ದಾರೆ.
ಕಳೆದ ಒಂದು ತಿಂಗಳಿಂದ ರವಿ ಅವರು ಜ್ಯಾಂಡೀಸ್ ಕಾಯಿಲೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲಿ ಕೊನೆಯುಸಿರೆಳೆದಿದ್ದಾರೆ.
ರವಿ ಅವರು ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಪಾತ್ರದಲ್ಲಿ ಪ್ರೇಕ್ಷಕರ ಹೃದಯ ಗೆದ್ದಿದ್ದು, ಮುಕ್ತಮುಕ್ತ, ಚಿತ್ರಲೇಖ, ಯಶೋಧೆ, ವರಲಕ್ಷ್ಮಿ ಸ್ಟೋರ್ಸ್ ಸೇರಿದಂತೆ ಅನೇಕ ಧಾರವಾಹಿಗಳಲ್ಲಿ ನಟಿಸಿದ್ದಾರೆ.
ಇನ್ನು ರವಿ ಅವರು ಎಂಎ ಇಂಗ್ಲಿಷ್ ಮತ್ತು ಎಲ್ಎಲ್ಬಿ ಮುಗಿಸಿದ್ದು, ಬಳಿಕ 1996ರಲ್ಲಿ ಜನದನಿ ಹವ್ಯಾಸಿ ನಾಟಕ ತಂಡ ಸೇರಿ ಬಳಿಕ ಸಿನಿಮಾ, ಧಾರವಾಹಿಗಳಲ್ಲಿ ನಟಿಸಲು ಆರಂಭಿಸಿದ್ದಾರೆ.