ಉತ್ತರಪ್ರದೇಶ, ಸೆ 15 (DaijiworldNews/HR): ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಇಬ್ಬರು ಸಹೋದರಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಲಖಿಂಪುರ ಖೇರಿ ಜಿಲ್ಲೆಯ ನಿಘಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಪೂನಂ (15) ಮತ್ತು ಮನಿಶಾ (17) ಎಂದು ಗುರುತಿಸಲಾಗಿದೆ.
ಮೃತದೇಹಗಳು ಪತ್ತೆಯಾದ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.
ಇನ್ನು ಬೈಕ್ ನಲ್ಲಿ ಬಂದ ಮೂವರು ಯುವಕರು ನನ್ನ ಮಕ್ಕಳನ್ನು ಅಪಹರಿಸಿ ಅತ್ಯಾಚಾರ ಮಾಡಿ ಮರಕ್ಕೆ ನೇಣು ಹಾಕಿದ್ದಾರೆ ಎಂದು ಮೃತರ ತಾಯಿ ಮಾಯಾದೇವಿ ಆರೋಪಿಸಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.