ಬೆಂಗಳೂರು, ಸೆ 15 (DaijiworldNews/MS): ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರು ಸುಧಾಕರ್ ಅವರು ಮುಂಗಾರು ಅಧಿವೇಶನಕ್ಕೆ ಗೈರಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಅನಾರೋಗ್ಯದ ಕಾರಣ, ವೈದ್ಯರು ಕೆಲ ದಿನಗಳು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ವಿಧಾನಮಂಡಲ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವುದಕ್ಕೆ ವಿಷಾದವಿದೆ. ಆದಷ್ಟು ಬೇಗ ಕರ್ತವ್ಯಕ್ಕೆ ಹಾಜರಾಗುತ್ತೇನೆ' ಎಂದು ಬರೆದುಕೊಂಡಿದ್ದಾರೆ.
ಸೋಮವಾರದಿಂದ ಆರಂಭವಾಗಿರುವ ಮುಂಗಾರು ಅಧಿವೇಶನದಲ್ಲಿ ಆರೋಗ್ಯ ಸಚಿವರು ಗೈರುಹಾಜರಾಗುತ್ತಿರುವುದು ಎದ್ದು ಕಂಡಿತ್ತು. ಇತ್ತೀಚಿಗೆ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ಅವರು, ಯಶಸ್ವಿಯಾಗಿ ನಿರ್ವಹಿಸಿದ್ದರು.